ಮುಲ್ಕಿ: ಕಟೀಲು ತಾಯಿಯ ಸೇವೆಯ ಧನ್ಯತೆಯೊಂದಿಗೆ ನಿಸ್ವಾರ್ಥ ಸೇವೆಗೆ ಲಿಂಗಪ್ಪ ಶೇರಿಗಾರ್ ಅವರಿಗೆ ಸಂದ ಗೌರವವಾಗಿದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದರು.
ಕಟೀಲು ರಥ ಬೀದಿಯಲ್ಲಿ ಕಟೀಲು ಲಿಂಗಪ್ಪ ಶೇರಿಗಾರ್ ಅಭಿಮಾನಿ ಬಳಗ ಹಾಗೂ ನಾಗರಿಕರ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾದಸ್ವರ ವಾದಕ ಲಿಂಗಪ್ಪ ಶೇರಿಗಾರ್ ಕಟೀಲು ಅವರ ಅಭಿನಂದನೆ ಕಾರ್ಯಕ್ರಮದಲ್ಲಿ ಹೇಳಿದರು.
ಮುಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಲಿಂಗಪ್ಪ ಶೇರಿಗಾರರ ಸಾಧನೆಗೆ ರಾಷ್ಟ್ರ ಪ್ರಶಸ್ತಿ ಸಿಗಲಿ ಎಂದು ಹಾರೈಸಿದರು. ಕಟೀಲು ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು. ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ ಶುಭ ಹಾರೈಸಿದರು. ಶ್ರೀಹರಿ ಆಸ್ರಣ್ಣ ಅಭಿನಂದನೆ ಭಾಷಣ ಮಾಡಿದರು.
ಲಿಂಗಪ್ಪ ಶೇರಿಗಾರ್ ಹಾಗೂ ಅವರ ಪತ್ನಿಯನ್ನು ಸನ್ಮಾನಿಸಲಾಯಿತು. ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಂಗಳೂರು ಉಪವಿಭಾಗಾಧಿಕಾರಿ ಮದನ್ ಮೋಹನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ , ಸಂದೇಶ್ ಕುಮಾರ್‌ಶೆಟ್ಟಿ, ನಾಗೇಶ್ ಬಪ್ಪನಾಡು, ಬಿಜೆಪಿ ಮುಖಂಡ ಈಶ್ವರ್ ಕಟೀಲು ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೊಡೆತ್ತೂರು ಭುವನಾಭಿರಾಮ ಉಡುಪ, ಮುಖ್ಯಪ್ರಾಣ ಕಿನ್ನಿಗೋಳಿ, ರಾಮಕ್ಕ ಗಿಡಿಗೆರೆ, ಸೀತಾರಾಮ ಕುಮಾರ್ ಕಟೀಲು, ಮುಖ್ಯಪ್ರಾಣ ಕಿನ್ನಿಗೋಳಿ ಅವರನ್ನು ಗೌರವಿಸಲಾಯಿತು. ಅರ್ಚಕ ಕಮಲಾದೇವಿ ಪ್ರಸಾದ್ ಆಸ್ರಣ್ಣ ಸ್ವಾಗತಿಸಿದರು. ರಾಜೇಂದ್ರ ಪ್ರಸಾದ್ ಎಕ್ಕಾರು, ಸಂತೋಷ್ ಆಳ್ವ ನಿರೂಪಿದರು. ಭುವನಾಭಿರಾಮ ಉಡುಪ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಲಿಂಗಪ್ಪ ಶೇರಿಗಾರ್ ಕಟೀಲು ಹಾಗೂ ನಾಗೇಶ್ ಬಪ್ಪನಾಡು ಅವರಿಂದ ನಾಗಸ್ವರ ವಾದ್ಯಗೋಷ್ಠಿ ನಡೆಯಿತು.
Kshetra Samachara
18/01/2021 09:37 am