ಬಂಟ್ವಾಳ: ಇಲ್ಲಿನ ಜೇಸಿಐ ಜೋಡುಮಾರ್ಗ ನೇತ್ರಾವತಿಯ ನೂತನ ಅಧ್ಯಕ್ಷೆ ಶೈಲಜಾ ರಾಜೇಶ್ ಹಾಗೂ ಇತರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಭಾನುವಾರ ಬಿ.ಸಿ.ರೋಡಿನ ಖಾಸಗಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಸಮಾಜಮುಖಿ ಕಾರ್ಯಗಳಲ್ಲಿ ಜೇಸಿಐ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ ಎಂದರು.
ಬಿ.ಸಿ.ರೋಡಿನ ಹಿರಿಯ ನ್ಯಾಯವಾದಿ ಸತೀಶ್ ರಾವ್, ಸೇವ್ ಲೈಫ್ ಚ್ಯಾರಿಟೇಬಲ್ ಟ್ರಸ್ಟ್ ಸ್ಥಾಪಕ ಅರ್ಜುನ್ ಭಂಡಾರ್ಕರ್, ವಲಯ ಉಪಾಧ್ಯಕ್ಷ ಶರತ್ಕುಮಾರ್ ಶುಭ ಹಾರೈಸಿದರು. ಜೇಸಿ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪೂವಾಧ್ಯಕ್ಷ ಅಹಮ್ಮದ್ ಮುಸ್ತಾಫ ಅಧ್ಯಕ್ಷರನ್ನು ಪರಿಚಯಿಸಿದರು. ನಿಕಟಪೂರ್ವ ಅಧ್ಯಕ್ಷ ಶ್ರೀನಿಧಿ ಭಟ್ ವರದಿ ಮಂಡಿಸಿದರು. ಕಾರ್ಯದರ್ಶಿ ಕಿಶನ್ ಎನ್.ರಾವ್, ಕೋಶಾಧಿಕಾರಿ ಹರಿಪ್ರಸಾದ್ ಕುಲಾಲ್ ಉಪಸ್ಥಿತರಿದ್ದರು.
ನೂತನ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಕಳೆದ ಸಾಲಿನ ಐಪಿಪಿ ಹರ್ಷರಾಜ್ ಅವರನ್ನು ಗೌರವಿಸಲಾಯಿತು. ನೂತನ ಕಾರ್ಯದರ್ಶಿ ಮಲ್ಲಿಕಾ ಆಳ್ವ ವಂದಿಸಿದರು.
Kshetra Samachara
18/01/2021 08:18 pm