ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಸ್ವಾಮಿ ವಿವೇಕಾನಂದ ಜಯಂತ್ಯುತ್ಸವ; "ಶಾಂತಿಗಾಗಿ ಯುವಜನರು" ಕಾರ್ಯಾಗಾರ

ಮುಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಮಾರ್ಗದರ್ಶನದಲ್ಲಿ ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ "ಶಾಂತಿಗಾಗಿ ಯುವಜನರು" ಕಾರ್ಯಾಗಾರ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಅನಾವರಣಗೊಳಿಸುವುದರ ಮೂಲಕ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು.

ಅಧ್ಯಕ್ಷತೆಯನ್ನು ಯುವ ಸಮನ್ವಯಾಧಿಕಾರಿ ನೆಹರೂ ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ ವಹಿಸಿ ಮಾತನಾಡಿ, ಮೇರು ವ್ಯಕ್ತಿತ್ವದ ಸ್ವಾಮಿ ವಿವೇಕಾನಂದರು ಯುವ ಜನಾಂಗಕ್ಕೆ ಆದರ್ಶಪ್ರಾಯರು ಎಂದರು. ಮಂಗಳೂರು ವಿವಿ ಕಾಲೇಜಿನ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಯತೀಶ್ ಕುಮಾರ್, ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಲೋಕಯ್ಯ ಸಾಲ್ಯಾನ್, ಯೋಗೀಶ್ ಕೋಟ್ಯಾನ್, ಪಡುಪಣಂಬೂರು ಗ್ರಾಪಂ ಸದಸ್ಯ ಸಂತೋಷ್ ಕುಮಾರ್, ಸಂಸ್ಥೆ ಗೌರವ ಅಧ್ಯಕ್ಷ ನಾರಾಯಣ ಜಿ.ಕೆ., ಅಧ್ಯಕ್ಷ ಸಂತೋಷ್ ದೇವಾಡಿಗ, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಮಹಿಳಾ ಕಾರ್ಯಾಧ್ಯಕ್ಷೆ ವಾಣಿ ಮಹೇಶ್, ಸಂಪತ್ ದೇವಾಡಿಗ ಉಪಸ್ಥಿತರಿದ್ದರು. ಪ್ರಶಾಂತ್ ಕುಮಾರ್ ಬೇಕಲ್ ನಿರೂಪಿಸಿದರು.

Edited By : Nagaraj Tulugeri
Kshetra Samachara

Kshetra Samachara

19/01/2021 10:57 am

Cinque Terre

4.79 K

Cinque Terre

0

ಸಂಬಂಧಿತ ಸುದ್ದಿ