ಬಂಟ್ವಾಳ: ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ’ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ ೩೦ರಂದು ಶನಿವಾರ ನಡೆಯಲಿದ್ದು, ಆ ಮೂಲಕ ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕರೆ ದುರಸ್ತಿಗೊಳಿಸಿದ್ದಾರೆ.
ಇಲ್ಲಿನ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ. ಮತ್ತಿತರ ಗಣ್ಯರು ಭಾಗವಹಿಸುವರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು,
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹಿತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ಭಟ್ಕಳ ಶಾಸಕ ಸುನಿಲ್ ನಾಯಕ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಶಾಸಕರಾದ ಹರೀಶ ಪೂಂಜ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಕೆ.ಹರೀಶ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಹೈಕೋರ್ಟಿನ ಎಡಿಷನಲ್ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್, ರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಪ್ರಶಾಂತ್ ರೈ ಮತ್ತಿತರ ಹಲವು ಮಂದಿ ಗಣ್ಯರು ಭಾಗವಹಿಸುವರು. ಈ ಬಾರಿ ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಜೊತೆಗೆ ಒಟ್ಟು ೧೫೦ಕ್ಕೂ ಮಿಕ್ಕಿ ಜೋಡಿ ಕೋಣಗಳು ಬಾಗವಹಿಸುವ ನಿರೀಕ್ಷೆ ಇದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.
Kshetra Samachara
28/01/2021 10:04 am