ಬಂಟ್ವಾಳ: ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ "ಹೆಣ್ಣು ಮಗುವನ್ನು ಓದಿಸಿ, ಹೆಣ್ಣು ಮಗು ರಕ್ಷಿಸಿ" ಯೋಜನೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಕಿಶೋರಿಯರು ಹಾಗೂ ಹೆಣ್ಣುಮಕ್ಕಳಿಗೆ ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ಕಾರ್ಯಕ್ರಮ ಹಾಗೂ ಬಿಬಿಬಿಪಿ ಲಾಂಛನದ ಚಿತ್ರ ಬಿಡಿಸುವ ಸ್ಪರ್ಧೆ ಬಿ.ಸಿ.ರೋಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ ಅವರು ಕಿಶೋರಿಯರಿಗೆ ಇಲಾಖೆಯ ವಿವಿಧ ಯೋಜನೆಗಳಾದ ಭಾಗ್ಯಲಕ್ಷ್ಮೀ, ಮಾತೃವಂದನಾ ಯೋಜನೆ, ಕಬ್ಬಿಣಾಂಶ ಮಾತ್ರೆ ವಿತರಣೆ, ತಿಂಗಳ ಪ್ರಥಮ ಗುರುವಾರ ಹುಟ್ಟಿದ ಹೆಣ್ಣು ಮಗುವಿಗೆ ಧನಸಹಾಯ ನೀಡಿ ಪ್ರೋತ್ಸಾಹಿಸುವಿಕೆ, ಕಿಶೋರಿ ಸಂಘ ರಚನೆ ಹೀಗೆ ಕಿಶೋರಿಯರಿಗೆ ಸಂಬಂಧಿಸಿದ ಎಲ್ಲ ವಿಷಯಗಳ ಕುರಿತು ಮಾಹಿತಿ ನೀಡಿದರು.
ಸಾಂತ್ವನ ಕೇಂದ್ರದಿಂದ ಆಗುವಂತಹ ಕೆಲಸ ಕಾರ್ಯಗಳ ಕುರಿತು ಮಾಹಿತಿ ನೀಡಲಾಯಿತು. ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿಯ ಅಧ್ಯಕ್ಷೆ ಗೀತಾ ಜಯತೀರ್ಥ ಬಹುಮಾನ ವಿತರಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ ಶುಭ ಹಾರೈಸಿದರು. ವಿಜಯವಾಣಿ ಸ್ವಾಗತಿಸಿ, ವಂದಿಸಿದರು. ಹಿರಿಯ ಮೇಲ್ವಿಚಾರಕಿ ಶ್ರೀಮತಿ ನಿರ್ವಹಿಸಿದರು.
Kshetra Samachara
29/01/2021 07:48 pm