ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ
ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ನಡೆದ ಇತಿಹಾಸ ಪ್ರಸಿದ್ದ 'ವೀರ -ವಿಕ್ರಮ' ಜೋಡುಕರೆ ಬಯಲು ಕಂಬಳದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಮೂವರು ಕಂಬಳ ಸಾಧಕರನ್ನು ಸನ್ಮಾನಿಸಿದರು.
ಕಂಬಳ ಕ್ಷೇತ್ರದಲ್ಲಿ 'ಕ್ರೀಡಾರತ್ನ' ಪ್ರಶಸ್ತಿ ಪುರಸ್ಕೃತರಾದ ಶ್ರೀನಿವಾಸ ಗೌಡ, ಸುರೇಶ್ ಎಂ. ಶೆಟ್ಟಿ, ಪ್ರವೀಣ್ ಕೋಟ್ಯಾನ್ ಅವರನ್ನು ಉಪಮುಖ್ಯ ಮಂತ್ರಿಯವರು ಆತ್ಮೀಯವಾಗಿ ಗೌರವಿಸಿದರು.
ಈ ಸಂದರ್ಭ ಶಾಸಕರು ಸೇರಿದಂತೆ ಅನೇಕ ಮಂದಿ ಗಣ್ಯರು ಉಪಸ್ಥಿತರಿದ್ದರು.
Kshetra Samachara
31/01/2021 10:08 am