ಮುಲ್ಕಿ: ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮುಲ್ಕಿ ಸಹಕಾರದಲ್ಲಿ ವಿವೇಕಾನಂದರ ಜಯಂತಿಯ ಪ್ರಯುಕ್ತ "ವಿವೇಕ ಜಾಗೃತಿ" ಕಾರ್ಯಕ್ರಮ ಮುಲ್ಕಿಯ ಸ್ವಾಮಿ ವಿವೇಕಾನಂದ ಮಂದಿರ, ವಿವೇಕ ಜಾಗೃತಿ ಬಳಗ ದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪುನರೂರು ಪ್ರತಿಷ್ಠಾನ (ರಿ)ನ ಗೌರವಾಧ್ಯಕ್ಷರಾದ ಹರಿಕೃಷ್ಣ ಪುನರೂರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಉತ್ತಮ ಸಮಾಜಕ್ಕಾಗಿ ಮಾರ್ಗದರ್ಶಿಗಳ ಅಗತ್ಯವಿದ್ದು ಪುನರೂರು ಪ್ರತಿಷ್ಠಾನದಿಂದ ಜ್ಞಾನವೃದ್ಧಿಯ ಕೆಲಸ ಆಗುತ್ತಿರುವುದು ಶ್ಲಾಘನೀಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಮುಲ್ಕಿಯ ಸ್ವಾಮಿ ವಿವೇಕಾನಂದ ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಶ್ರೀನಿವಾಸ ಸಿ ಶ್ರಿಯಾನ್ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಧಾರ್ಮಿಕತೆಯ ಕಾರ್ಯಕ್ರಮದ ಮೂಲಕ ಯುವಕರನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡಲು ಪ್ರಯತ್ನಿಸುತ್ತಿರುವ ಸಂಘಟನೆಯ ಕಾರ್ಯ ಅಭಿನಂದನೀಯ ಎಂದರು.
ಮಂಗಳೂರು ಕೆಎಂಸಿ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಕೆ. ಮಾಧವ ಪೈ ರವರಿಂದ ವಿವೇಕಾನಂದರ ಆದರ್ಶಗಳು ಹಾಗೂ ಯುವಕರ ಜಾಗೃತಿ ಬಗ್ಗೆ ನಡೆದ ಪ್ರಧಾನ ಭಾಷಣದಲ್ಲಿ ಮಾತನಾಡಿ ಜೀವನದಲ್ಲಿ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಆಧ್ಯಾತ್ಮಿಕ ತತ್ವಗಳನ್ನು ಪಾಲಿಸುವ ಮುಖಾಂತರ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ವೇದಿಕೆಯಲ್ಲಿ ಡಿವೈನ್ ಪಾರ್ಕ್ ನ ಸೀತಾರಾಮ ಉಡುಪ, ಜೆಸಿಐ ಮುಲ್ಕಿ ಶಾಂಭವಿ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಪುನರೂರು ಪ್ರತಿಷ್ಠಾನದ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಅಧ್ಯಕ್ಷರಾದ ಪ್ರಾಣೇಶ್ ಭಟ್ ದೇ0ದಡ್ಕ, ಮತ್ತಿತರರು ಉಪಸ್ಥಿತರಿದ್ದರು. ದೇವಪ್ರಸಾದ್ ಪುನರೂರು ಸ್ವಾಗತಿಸಿದರು. ಜಿತೇಂದ್ರ ರಾವ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
04/02/2021 08:16 pm