ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನಕ್ಕೆ ಚಾಲನೆ

ಮುಲ್ಕಿ: ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕೆಮ್ರಾಲ್ ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಹಾಗೂ ಸಾಕ್ಷರತಾ ಅಭಿಯಾನ (ಪಿಎಂಜಿ ದಿಶಾ) ಪಕ್ಷಿಕೆರೆಯಲ್ಲಿ ಜರುಗಿತು.

ಕಾರ್ಯಕ್ರಮದ ಮುಖ್ಯ ಉದ್ದೇಶ ಪ್ರತಿ ಕುಟುಂಬದಲ್ಲಿ ಒಬ್ಬನನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡುವುದು. ಈ ಮೂಲ ಪರಿಕಲ್ಪನೆ ಭಾಗವಾಗಿ CSC e Governance VLE ಗಳ ಮೂಲಕ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ(PMG DISHA) ಎಂದು ಅನುಷ್ಠಾನವಾಗುತ್ತಿದೆ ಎಂದು ಪಕ್ಷಿಕೆರೆ ವಿನಾಯಕ ಮಿತ್ರ ಮಂಡಳಿ ಅಧ್ಯಕ್ಷ ಯಜ್ಞೇಶ್ ಪಿ. ಶೆಟ್ಟಿಗಾರ್ ಹೇಳಿದರು.

ಅಭಿಯಾನವನ್ನು ಮುಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಮ್ರಾಲ್ ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಬೊಳ್ಳೂರು, PMG DISHA ಜಿಲ್ಲಾ ಸಮನ್ವಯಾಧಿಕಾರಿ ಅವಿನಾಶ್, CSC VLE ನ ಲಕ್ಷ್ಮಿ ನಾರಾಯಣ, ಸಚಿನ್ ಶೆಟ್ಟಿ ಸುರಗಿರಿ, ಮಂಡಳಿ ಗೌರವಾಧ್ಯಕ್ಷ ಧನಂಜಯ ಶೆಟ್ಟಿಗಾರ್, ಸ್ಥಳೀಯರು, ಮಂಡಳಿ ಸದಸ್ಯರು ಭಾಗವಹಿಸಿದರು.

Edited By : Vijay Kumar
Kshetra Samachara

Kshetra Samachara

28/02/2021 09:54 pm

Cinque Terre

2.25 K

Cinque Terre

0

ಸಂಬಂಧಿತ ಸುದ್ದಿ