ಮಂಗಳೂರು: ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಾರ್ತಾಭಾರತಿ ಪತ್ರಿಕೆಯ ವರದಿಗಾರ ಬಂದೇ ನವಾಝ್ ಮ್ಯಾಗೇರಿ ಮತ್ತು ಉಪಸಂಪಾದಕ ಬಾಲಕೃಷ್ಣ ಜಾಡಬಂಡಿ ಹುಬ್ಬಳ್ಳಿಗೆ ವರ್ಗಾವಣೆಯಾಗುತ್ತಿರುವ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ಬೀಳ್ಕೊಡುಗೆ ಸನ್ಮಾನ ಸಮಾರಂಭವು ಪತ್ರಿಕಾ ಭವನದಲ್ಲಿ ಮಂಗಳವಾರ ನಡೆಯಿತು.
ಪತ್ರಕರ್ತರಾದ ಪುಷ್ಪರಾಜ್ ಬಿ.ಎನ್., ಸತ್ಯವತಿ, ಜಿತೇಂದ್ರ ಕುಂದೇಶ್ವರ, ಹರೀಶ್ ಮೋಟುಕಾನ, ರಾಘವ ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿದ ಪತ್ರಕರ್ತರು ಮಂಗಳೂರಿನ ಅನುಭವಗಳನ್ನು ಹಂಚಿಕೊಂಡು ಕೃತಜ್ಞತೆ ಸಲ್ಲಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ವಂದಿಸಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.
Kshetra Samachara
26/10/2021 08:44 pm