ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವದ ದಿನದಂದು ಮಂಗಳೂರು ನೆಹರೂ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು 2021 ನೇ ಸಾಲಿನ ಪ್ರತಿಷ್ಠಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಹಳೆಯಂಗಡಿ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ಸಂಸ್ಥೆಯ ಅಧ್ಯಕ್ಷ ಸಂತೋಷ್ ದೇವಾಡಿಗ ರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಸಮಾರಂಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರು,ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಪೊಲೀಸ್ ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಮಹಾಪೌರರು, ವಿವಿಧ ಇಲಾಖೆಯ ಆಯುಕ್ತರು, ಕರ್ನಾಟಕ ವಿವಿಧ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರುಗಳು, ಹಾಗೂ
ಸ್ಪೋರ್ಟ್ಸ್ ಕ್ಲಬ್ ನ ಗೌರವ ಅಧ್ಯಕ್ಷರು,ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಸದಸ್ಯೆಯರು ಉಪಸ್ಥಿತರಿದ್ದರು.
Kshetra Samachara
01/11/2021 05:57 pm