ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿಲ್ಪಾಡಿ: ದೇವಸ್ಥಾನಗಳು ಭಕ್ತಿಯ ಪ್ರತೀಕ: ಮಹಾಬಲೇಶ್ವರ ಭಟ್

ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಕುಮಾರ ಮಂಗಿಲ ಶ್ರೀ ಸುಬ್ರಮಣ್ಯ ದೇವಸ್ಥಾನದ ರಾಜ್ಯಗೋಪುರದ ಶಿಲಾನ್ಯಾಸ ಕಾರ್ಯಕ್ರಮವು ವೇದಮೂರ್ತಿ ವಾದಿರಾಜ ಉಪಾಧ್ಯಾಯ ಯವರ ವಿಶೇಷ ಪ್ರಾರ್ಥನೆಯೊಂದಿಗೆ ಕರ್ನಾಟಕ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ಚರ ಎಂ. ಎಸ್ ನೆರವೇರಿಸಿದರು.

ಈ ಸಂದರ್ಭ ಅವರು ಮಾತನಾಡಿ ದೇವಸ್ಥಾನಗಳು ಕರಾವಳಿ ಭಾಗದ ಭಕ್ತಿಯ ತಾಣಗಳಾಗಿದ್ದು ಭಕ್ತರ ಸಹಕಾರದಿಂದ ಅಭಿವೃದ್ಧಿಗೊಳ್ಳುತ್ತಿದೆ ಎಂದರು.

ಶಾಸಕರಾದ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಕೆ. ಅಭಯಚಂದ್ರ ಜೈನ್, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಮಾಜಿ ತಾಪಂ ಸದಸ್ಯ ಶರತ್ ಕುಬೆವೂರು, ದೇವಪ್ರಸಾದ್ ಪುನರೂರು, ಆಡಳಿತ ಮೊಕ್ತೇಸರ ಚಂದ್ರಶೇಖರ ಮಯ್ಯ, ವಿಕಾಸ್ ಶೆಟ್ಟಿ , ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಪ್ರಸಾದ ಮಯ್ಯ, ಮಧುಸೂದನ್ ಕಿಲ್ಪಾಡಿ ಮತ್ತಿತರರು ಉಪಸ್ಥಿತರಿರುವರು.

Edited By : PublicNext Desk
Kshetra Samachara

Kshetra Samachara

20/11/2021 10:27 am

Cinque Terre

1.81 K

Cinque Terre

0

ಸಂಬಂಧಿತ ಸುದ್ದಿ