ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ದನ ಸೇವಾ ಭಜನಾ ಮಂಡಳಿ ಸದಸ್ಯರಿಗೆ ದಾನಿಗಳಾದ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ಕೊಡಮಾಡಿದ ಸಮವಸ್ತ್ರವನ್ನು ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ, ಉದ್ಯಮಿ ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ ರವರು ಭಜನಾ ಮಂಡಳಿಯ ಸದಸ್ಯರಿಗೆ ದೇವಸ್ಥಾನದಲ್ಲಿ ವಿತರಿಸಿದರು.
ಈ ಸಂದರ್ಭ ಅವರು ಮಾತನಾಡಿ ಭಜನಾ ಮಂಡಳಿಯ ಸದಸ್ಯರು ಭಜನಾ ಕಾರ್ಯಕ್ರಮಗಳ ಮೂಲಕ ದೇವರ ಸೇವೆಯನ್ನು ಮಾಡುತ್ತಿದ್ದು ಇದರಿಂದ ನಾಡು ಸಮೃದ್ಧಿಯಾಗಲಿ ಎಂದು ಶುಭ ಹಾರೈಸಿದರು.
ಕರುಣಾಕರ ಶೆಟ್ಟಿ ಶಿಮಂತೂರು ಬಾವ,ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ ಕುಂದರ್, ಕಲ್ಪನಾ ಬಲ್ಲಾಳ್, ಉದಯಕುಮಾರ್ ಶೆಟ್ಟಿ ಅಧಿಧನ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ಶಿಮಂತೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
15/12/2021 05:07 pm