ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಹಾಗೂ ಕಿಲ್ಪಾಡಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ "ಯುವ ಸಪ್ತಾಹ" ಕಾರ್ಯಕ್ರಮ ಕಿಲ್ಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿಲ್ಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೊಲಕಾಡಿ ಶಾಲೆಯ ನಿವೃತ್ತ ಶಿಕ್ಷಕ ಅಚ್ಯುತ ಮಾಸ್ಟರ್ ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಇಂದಿನ ಯುವ ಜನಾಂಗ ಪಾಲಿಸುವುದರ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಧ್ಯೇಯವಾಗಿರಬೇಕು ಎಂದರು.
ಸಭೆಯಲ್ಲಿ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಇಂದಿನ ಯುವ ಜನಾಂಗ ಸ್ವಾಮಿ ವಿವೇಕಾನಂದರ ಜೀವನಶೈಲಿಯನ್ನು ಅನುಸರಿಸುವುದರ ಮುಖಾಂತರ ಸತ್ಪ್ರಜೆಗಳಾಗಿ ರಾಷ್ಟ್ರಕ್ಕೆ ಮಾದರಿಯಾಗಬೇಕು ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಸಿಬ್ಬಂದಿ ಸುರೇಶ್, ಉಪನ್ಯಾಸಕ ವಿಶಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಮೆಡಲಿನ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Kshetra Samachara
12/01/2022 12:12 pm