ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ಜಾತ್ರಾ ಮಹೋತ್ಸವ ಫೆ. 15 ರಿಂದ 20 ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಗ್ರಾಮದ ಸಭೆ ದೇವಸ್ಥಾನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ಮಾತನಾಡಿ ಕೋವಿಡ್ ನಿಯಮಗಳನ್ನು ಪಾಲಿಸಿ ಜಾತ್ರಾ ಮಹೋತ್ಸವ ನಡೆಯಲು ಗ್ರಾಮಸ್ಥರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ ಪಂಚಾಯತ್ ವತಿಯಿಂದ ಉತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮತ್ತಿತರರು ಮಾತನಾಡಿದರು.
ವೇದಿಕೆಯಲ್ಲಿ ದೇವಸ್ಥಾನದ ಅರ್ಚಕ ಪುರುಷೋತ್ತಮ ಭಟ್, ಸೀತಾರಾಮ್ ಭಟ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಮೋಹನ್ ಕೋಟ್ಯಾನ್ ಶಿಮಂತೂರು ವ್ಯವಸ್ಥಾಪನಾ ಸಮಿತಿ ಸದಸ್ಯೆ ಶಶಿಕಲಾ ಉಪಸ್ಥಿತರಿದ್ದರು.
ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರಮಿಸಿದ ಪುನರೂರು ಬಾಳಿಕೆ ಮನೆ ಭಾಸ್ಕರ ಶೆಟ್ಟಿ ಯವರ ನಿಧನಕ್ಕೆ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
Kshetra Samachara
13/01/2022 07:02 pm