ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಜ. 26ರ ಶಾಂತಿಯುತ ಪ್ರತಿಭಟನೆ ಯಶಸ್ವಿಗೊಳಿಸಲು ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಕರೆ

ಮುಲ್ಕಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ನಿರಾಕರಿಸಿರುವ ಹಿನ್ನಲೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜನವರಿ 26 ಗಣರಾಜ್ಯೋತ್ಸವದಂದು ಎಲ್ಲಾ ಬಿಲ್ಲವ ಸಂಘಟನೆಗಳು ಶಾಂತಿಯುತ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ್ ಕೋಟ್ಯಾನ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಅವರು ಮಾತನಾಡಿ ಜ. 26 ಮಧ್ಯಾಹ್ನ 3ಗಂಟೆಗೆ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ದಿಂದ ಸ್ತಬ್ಧಚಿತ್ರ ಶಾಂತಿಯುತ ಯಾತ್ರೆ ಯೊಂದಿಗೆ ಹೊರಟು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ತೆರಳಲಿದೆ.

ನಾರಾಯಣಗುರುಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಳದಿ ಸಮವಸ್ತ್ರ ಧರಿಸಿ ಯಾತ್ರೆಯಲ್ಲಿ ಭಾಗವಹಿಸಬೇಕು ಹಾಗೂ ಯಾವುದೇ ರಾಜಕೀಯ ಪಕ್ಷದ ಘೋಷಣೆಯನ್ನು ಕೂಗದೆ ಮೌನವಾಗಿ ಜಾಥಾವನ್ನು ಯಶಸ್ವಿಗೊಳಿಸಬೇಕು ಎಂದು ಡಾ. ರಾಜಶೇಖರ ಕೋಟ್ಯಾನ್ ವಿನಂತಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

23/01/2022 08:37 pm

Cinque Terre

1.78 K

Cinque Terre

1

ಸಂಬಂಧಿತ ಸುದ್ದಿ