ಮುಲ್ಕಿ: ಮುಲ್ಕಿ ರೋಟರಿ ಕ್ಲಬ್ ವತಿಯಿಂದ ವೃತ್ತಿ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮುಲ್ಕಿ ಪರಿಸರದ 25 ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಕಾರ್ನಾಡ್ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ರೋಟರಿ ಕ್ಲಬ್ ಅಧ್ಯಕ್ಷ ಶಿವರಾಂ ಜಿ.ಅಮೀನ್ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉದ್ಯಮಿ ವಾಸು ಪೂಜಾರಿ ಚಿತ್ರಾಪು ಮಾತನಾಡಿ ಗ್ರಾಮೀಣ ಪ್ರದೇಶದ ಸಾಧಕರನ್ನು ಗುರುತಿಸಿ ಗೌರವಿಸುವ ರೋಟರಿ ಕ್ಲಬ್ ಕಾರ್ಯ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ರೊ. ಅಶೋಕ್ ಕುಮಾರ್ ಶೆಟ್ಟಿ, ಅಬ್ಬಾಸಾಲಿ, ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸ್ವರಾಜ್ ಶೆಟ್ಟಿ, ಮುಲ್ಕಿ ರೋಟರಿ ಕ್ಲಬ್ ಕಾರ್ಯದರ್ಶಿ ರವಿಚಂದ್ರ ರಾವ್, ಮತ್ತಿತರರು ಉಪಸ್ಥಿತರಿದ್ದರು. ನರೇಂದ್ರ ಕೆರೆಕಾಡು ನಿರೂಪಿಸಿದರು.
Kshetra Samachara
28/01/2022 07:49 pm