ಮುಲ್ಕಿ: ಮುಲ್ಕಿ ಸಮೀಪದ ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ಶ್ರೀ ಜಾರಂದಾಯ ಸೇವಾ ಮಿತ್ರಮಂಡಳಿ ಹಾಗೂ ಮಹಿಳಾ ಮಂಡಳಿ ವತಿಯಿಂದ ಭಜನಾ ಮಂಗಲೋತ್ಸವ ವಿಜ್ರಂಭಣೆಯಿಂದ ನಡೆಯಿತು.
ಪ್ರಾತಃಕಾಲ ಶಿಮಂತೂರು ವೇದವ್ಯಾಸ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಭಜನಾ ಜ್ಯೋತಿ ಬೆಳಗಿಸುವುದರ ಮೂಲಕ ಭಜನಾ ಮಂಗಲೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ದೈವಸ್ಥಾನದ ಅರ್ಚಕ ಶೇಖರ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ, ಗೌರವಾಧ್ಯಕ್ಷ ಮುರಳೀಧರ ಭಂಡಾರಿ, ಕೋಶಾಧಿಕಾರಿ ಸುಂದರ ಶೆಟ್ಟಿ,ಶ್ರೀ ಜಾರಂದಾಯ ಸೇವಾ ಮಿತ್ರ ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಕುಬೆವೂರು, ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಾಜೀ ಅಧ್ಯಕ್ಷ ಕೃಷ್ಣ ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ, ಮಹಿಳಾ ಮಂಡಳಿ ಅಧ್ಯಕ್ಷೆ ಶೋಭಾ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಕೆಂಚನಕೆರೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಭಜನಾ ಸಂಕೀರ್ತನೆ ಆರಂಭಗೊಂಡು ವಿವಿಧ ಭಜನಾ ಮಂಡಳಿಯವರಿಂದ ಶ್ರೀ ದೇವರ ನಾಮ ಸಂಕೀರ್ತನೆಯೊಂದಿಗೆ ರಾತ್ರಿ
ಮಹಾ ಪೂಜೆಯೊಂದಿಗೆ ಮಂಗಲೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
Kshetra Samachara
12/02/2022 09:41 am