ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಮಂತೂರು: ಸಂಭ್ರಮದ ಉತ್ಸವ ಬಲಿ, ಚಂದ್ರಮಂಡಲ ರಥೋತ್ಸವ

ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ ದ್ವಜಾರೋಹಣ ಹಾಗೂ ರಾತ್ರಿ ಉತ್ಸವ ಬಲಿ, ಚಂದ್ರಮಂಡಲ ರಥೋತ್ಸವ, ಪಲ್ಲಕ್ಕಿ ಉತ್ಸವ ವಿಜ್ರಂಭಣೆಯಿಂದ ನಡೆಯಿತು.

ಈ ಸಂದರ್ಭ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಜ್ಯೋತಿಷಿ ವಿಶ್ವನಾಥ್ ಭಟ್ ಎಸ್. ಕೋಡಿ, ಮತ್ತಿತರರು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/02/2022 09:34 pm

Cinque Terre

1.65 K

Cinque Terre

0

ಸಂಬಂಧಿತ ಸುದ್ದಿ