ಕಟೀಲು : ಕ್ರೀಡೆಯ ಮೂಲಕ ಸಂಘಟನೆ ಬೆಳೆದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ತೊಡಗಿಸಿಕೊಂಡ ಕಟೀಲಿನ ಸ್ಫೋರ್ಟ್ಸ್ ಗೇಮ್ಸ್ ಕ್ಲಬ್ ನ ಸಾಧನೆ ಅಭಿನಂದನೀಯ ಎಂದು ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಕಟೀಲು ಸ್ಪೋರ್ಟ್ಸ್ ಗೇಮ್ಸ್ ಕ್ಲಬ್ ನ ಬೆಳ್ಳಿ ಹಬ್ಬದ ಪ್ರಯುಕ್ತ ನಿರ್ಮಿಸಿದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ, ಕಮಲದೇವಿ ಪ್ರಸಾದ ಆಸ್ರಣ್ಣ, ಡಾ.ಶಶಿಕುಮಾರ್,ಉದ್ಯಮಿ ಗಿರೀಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ್ ಕಟೀಲ್, ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಜನರಲ್ ಮ್ಯಾನೇಜರ್ ರತ್ನಾಕರ ಶೆಟ್ಟಿ ಎಕ್ಕಾರು, ಲೋಕಯ್ಯ ಸಾಲಿಯಾನ್, ಸ್ಯಾನೀ ಪಿಂಟೋ, ಕಟೀಲು ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ವಿಶ್ವ ಬ್ರಾಹ್ಮಣ ಸಂಘದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ಕಟೀಲು ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಶಾಂತಿ ಸಲ್ಡಾನ , ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ರವಿಕುಮಾರ್, ಸಂಸ್ಥೆಯ ಗೌರವಾಧ್ಯಕ್ಷ ರಮೇಶ್ ಮತ್ತಿತರರಿದ್ದರು. ಸಂಸ್ಥೆಯ ಅಧ್ಯಕ್ಷ ಕೇಶವ ಕಟೀಲ್ ಸ್ವಾಗತಿಸಿ, ರಾಜೇಂದ್ರಪ್ರಸಾದ್ ನಿರೂಪಿಸಿದರು.
ಇದೇ ಸಂದರ್ಭ ಸತ್ಯನಾರಾಯಣ ಪೂಜೆ ನಡೆಯಿತು. ಸಂಸ್ಥೆಗೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.
Kshetra Samachara
17/02/2022 07:44 am