ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಶಿಮಂತೂರು ಯುವಕ ಮಂಡಲದ ಸದಸ್ಯರ ಸಾಮಾಜಿಕ ಕಾರ್ಯಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ಮಾತನಾಡಿ ಸಾಧಕರನ್ನು ಗೌರವಿಸುವ ಕಾರ್ಯ ಶ್ಲಾಘನೀಯವಾಗಿದ್ದು ದೇವಸ್ಥಾನದ ಅಭಿವೃದ್ಧಿಗೆ ಸರ್ವತೋಮುಖವಾಗಿ ಶ್ರಮಿಸಿದ ಯುವಕ ಮಂಡಲದ ಕಾರ್ಯ ಅಭಿನಂದನೀಯ ಎಂದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಅನಂತ ರಾಜರಾವ್ (ಹೈನುಗಾರಿಕೆ), ಹರೀಶ್ ಶೆಟ್ಟಿ ಪಂಜಿನಡ್ಕ (ಕೃಷಿ ಕ್ಷೇತ್ರ), ಶಿಮಂತೂರು ಚಂದ್ರಹಾಸ ಸುವರ್ಣ (ಸಾಹಿತ್ಯ ಕ್ಷೇತ್ರ),ರನ್ನು "ಸಾಹಿತ್ಯ ಸೌರಭ" ಬಿರುದು ನೀಡಿ ಸನ್ಮಾನಿಸಲಾಯಿತು.
ಶಿಮಂತೂರು ಯುವಕ ಮಂಡಲದ ಸಾಮಾಜಿಕ ಕೈಂಕರ್ಯ ಕ್ಕಾಗಿ ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.
ಕ್ಷೇತ್ರದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಿರಂತರವಾಗಿ ವಿದ್ಯುತ್ ದೀಪಾಲಂಕಾರ ಮಾಡುತ್ತಿರುವ ಸುರೇಂದ್ರ ರವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ಚಂದ್ರ ಅಜಿಲ,ಹರೀಶ್ ಶೆಟ್ಟಿ, ಮೋಹನ್ ಕೋಟ್ಯಾನ್,ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಮಾಜಿ ಅಧ್ಯಕ್ಷ ಸತೀಶ್ ಶೆಟ್ಟಿ, ವೇಣುಗೋಪಾಲ ಶೆಟ್ಟಿ, ಗೋಪಾಲ್ ಶಿಮಂತೂರು, ಕಾರ್ಯದರ್ಶಿ ದೀಪಕ್, ಮತ್ತಿತರರು ಉಪಸ್ಥಿತರಿದ್ದರು.
ರಂಗಕರ್ಮಿ ವೇಣುಗೋಪಾಲ ಶೆಟ್ಟಿ ಪರೆಂಕಿಲ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಲಕುಮಿ ಕಲಾವಿದರು ಮಂಗಳೂರು ವತಿಯಿಂದ ನಾಟಕ ನಡೆಯಿತು.
Kshetra Samachara
19/02/2022 11:36 am