ಮುಲ್ಕಿ: ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹಗಲು ರಥೋತ್ಸವ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆದು ವಿವಿಧ ಬಿರುದಾವಳಿ ಗಳೊಂದಿಗೆ ಶ್ರೀದೇವರ ಉತ್ಸವ ಬಲಿ ಹೊರಟು ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.
ಕಾರ್ನಾಡ್ ಹರಿಹರ ದೇವಸ್ಥಾನದ ಆಡಳಿತ ಮೊಕ್ತೇಸರ ಅರವಿಂದ ಪೂಂಜಾ, ಡಾ. ಹರಿಶ್ಚಂದ್ರ ಸಾಲ್ಯಾನ್,ಮತ್ತಿತರರು ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಚಂದ್ರಹಾಸ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ ಕಲ್ಪನಾ ಬಲ್ಲಾಳ, ವಿಶ್ವನಾಥ ಶೆಟ್ಟಿ, ಚಂದ್ರಹಾಸ ಸುವರ್ಣ, ಶ್ರೀಪತಿ ಭಟ್, ಮುಲ್ಕಿ ಠಾಣಾ ಎಎಸ್ಸೈ ಚಂದ್ರಶೇಖರ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ಉದಯಕುಮಾರ್ ಶೆಟ್ಟಿ ಅದಿಧನ್, ಜಯಕರ್ ಶೆಟ್ಟಿ ಮುಂಬೈ, ಬಾಬಾ ರಂಜನ್ ಶೆಟ್ಟಿ ಮಜಲ ಗುತ್ತು ಮತ್ತಿತರರು ಉಪಸ್ಥಿತರಿದ್ದರು
Kshetra Samachara
19/02/2022 09:22 pm