ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಯಕ್ಷಗಾನವನ್ನು ಉಳಿಸಿ ಬೆಳೆಸಬೇಕು: ಡಾ. ರಾಜೇಂದ್ರ ಕುಮಾರ್

ಮಂಗಳೂರು: ಯಕ್ಷಗಾನವನ್ನು ದೂರದಿಂದ ನೋಡುವಾಗ ಸುಲಭ ಎನಿಸುತ್ತದೆ. ಆದರೆ ಅದನ್ನು ಆರಾಧಿಸಿಕೊಂಡು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ವಿಚಾರ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಅವರು ಶನಿವಾರ ಯಕ್ಷಧ್ರವ ಪಟ್ಲ ಫೌಂಡೆಶನ್ ಟ್ರಸ್ಟ್ ವತಿಯಿಂದ ನಡೆದ ಟ್ರಸ್ಟ್‌ಗೆ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ರವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ರವರು ತಮ್ಮ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.

ಡಾ. ಎಂ.ಎಲ್. ಸಾಮಗ, ಮಾಜಿ ಸಚಿವ ಅಭಯಚಂದ್ರ ಜೈನ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿದರು.

ಈ ಸಂದರ್ಭ ಸಾಧನೆ ಮಾಡಿದ ಯುವ ಪ್ರತಿಭೆ ವೃಂಧಾ ರವರನ್ನು ಸನ್ಮಾನಿಸಲಾಯಿತು. ಐದು ಮಂದಿಗೆ ಆರ್ಥಿಕ ನೆರವು ನೀಡಲಾಯಿತು.

ಕದ್ರಿ ನವನೀತ್ ಶೆಟ್ಟಿ . ಪ್ರದೀಪ್ ಆಳ್ವ ಕದ್ರಿ ಪಟ್ಲ ಸತೀಶ್ ಶೆಟ್ಟಿ ಎಸಿ ಮಧನ್ ಮೋಹನ್, ಉದ್ಯಮಿ ಬರೋಡಾ ಶಶಿಧರ್ ಶೆಟ್ಟಿ ಡಾ.ಸತೀಶ್ ಭಂಡಾರಿ, ಸಿಎ ದಿವಾಕರ ರಾವ್ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಾರ್ಗದರ್ಶಕರಾದ ಮಹಾಬಲ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ರೈ, ಉಪಾಧ್ಯಕ್ಷರಾದ ಡಾ. ಮನುರಾವ್, ದುರ್ಗಾಪ್ರಕಾಶ್ ರಾವ್, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ ನಗರ , ರಾಜೀವ ಪೂಜಾರಿ ಕೈಕಂಬ ಮತ್ತಿತರರು ಇದ್ದರು.

ರವಿ ಶೆಟ್ಟಿ ಅಶೋಕನಗರ ವಂದಿಸಿದರು.‌ಪುರುಷೋತ್ತಮ ಭಂಡಾರಿ ಕಾರ್ಯಕ್ರಮ‌ ನಿರ್ವಹಿಸಿದರು.

Edited By : PublicNext Desk
Kshetra Samachara

Kshetra Samachara

19/02/2022 09:55 pm

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ