ಮುಲ್ಕಿ: ಮುಲ್ಕಿ ಸಮೀಪದ ಚಿತ್ರಾಪು ಯುವಕ, ಯುವತಿ ಹಾಗೂ ಮಹಿಳಾ ಮಂಡಲದ 44ನೇ ವಾರ್ಷಿಕೋತ್ಸವ ಚಿತ್ರಾಪು ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಚಿತ್ರಾಪು ಪರಿಸರದಲ್ಲಿ ಶಿಕ್ಷಣಕ್ಕೆ ಬೆಂಬಲವಾಗಿ ಶಾಲೆಯ ಅಭಿವೃದ್ಧಿಗೆ ಯುವಕ ಯುವತಿ ಹಾಗೂ ಮಹಿಳಾ ಮಂಡಲದ ಕಾರ್ಯ ಶ್ಲಾಘನೀಯವಾಗಿದ್ದು ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ ಶಿಕ್ಷಕರ ಪಾತ್ರ ಅಭಿನಂದನೀಯ ಎಂದರು.
ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಚಿತ್ರಾಪು ಸರಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಿ ವರ್ಗಾವಣೆ ಗೊಳ್ಳುತ್ತಿರುವ ಜಯಶೀಲ ಶೆಟ್ಟಿ ಯವರನ್ನು ಗೌರವಿಸಲಾಯಿತು. ಹಾಗೂ ಮಕ್ಕಳಿಗೆ ವಿದ್ಯಾನಿಧಿ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕಳೆದ ದಿನದ ಹಿಂದೆ ನಿಧನರಾದ ಯುವಕ ಮಂಡಲದ ಮಾಜಿ ಅಧ್ಯಕ್ಷ ನವೀನ್ ಕುಮಾರ್ ರವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮುಖ್ಯ ಅತಿಥಿಗಳಾಗಿ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಮುಲ್ಕಿ ನಪಂ ಸದಸ್ಯೆ ರಾಧಿಕಾ ಕೋಟ್ಯಾನ್, ಯೋಗೀಶ್ ಕೋಟ್ಯಾನ್, ಯುವಕ ಮಂಡಲದ ಅಧ್ಯಕ್ಷ ತುಷಾರ್ ಕರ್ಕೇರ, ಕಾರ್ಯದರ್ಶಿ ಸಂದೀಪ್ ಸುವರ್ಣ,ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜ್ವಲ್ ಆರ್ ಕೋಟ್ಯಾನ್ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
Kshetra Samachara
19/02/2022 11:08 pm