ಮುಲ್ಕಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಲು ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಶಿಮಂತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಶೆಟ್ಟಿ ಹೇಳಿದರು.
ಅವರು ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಆದಿ ಜನಾರ್ದನ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಮಕ್ಕಳಿಗೆ ಭಜನೆ ಕುಣಿತದ ತರಬೇತಿ ನೀಡಿದ ಶಿಕ್ಷಕರಾದ ಸುಧಾಕರ ನಾಯಕ್ ಮತ್ತು ಸುಮಂತ ನಾಯಕ್ ಕಲ್ಲಮುಂಡ್ಕೂರು ರವರನ್ನು ಸನ್ಮಾನಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಭಜನಾ ಮಂಡಳಿಯ ಪೋಷಕರ ನೆಲೆಯಲ್ಲಿ ರೂಪ ವಿಷ್ಣುಮೂರ್ತಿ ಭಟ್, ಮಮತಾ ಅನಿಲ್ ಶೆಟ್ಟಿ, ಚೈತ್ರಾ ಗುರುರಾಜ್ ಭಟ್ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್ ,ಮುಲ್ಕಿ ಠಾಣಾ ಎಸ್ಐ ಚಂದ್ರಶೇಖರ್, ಅವಿನಾಶ್ ಶೆಟ್ಟಿ ಬರ್ಕೆ, ಉಪಸ್ಥಿತರಿದ್ದರು ವೇಣುಗೋಪಾಲ್ ಪರೆಂಕಿಲ ನಿರೂಪಿಸಿದರು. ಬಳಿಕ ಮಕ್ಕಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು
Kshetra Samachara
22/02/2022 04:19 pm