ಮುಲ್ಕಿ :ತಾಲೂಕಿನ ಕೊಲ್ನಾಡ್ ನಲ್ಲಿ ಮಾಚ್೯ನಲ್ಲಿ ನಡೆಯುವ ಕೃಷಿಸಿರಿ ಕೃಷಿ ರಾಜ್ಯಸಮ್ಮೇಳನದ ಪೂರ್ವಭಾವಿ ಸರಣಿ ಕಾರ್ಯಕ್ರಮದಲ್ಲಿ ಸಾಂಪ್ರಾದಾಯಿಕ ಕ್ರೀಡೋತ್ಸವ ಫೆಬ್ರವರಿ 27 ರಂದು ಭಾನುವಾರ ಕೃಷಿ ಮೇಳ ನಡೆಯುವ ಕೊಲ್ನಾಡ್ ಮೈದಾನದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಲಗೋರಿ, ಹಗ್ಗ ಜಗ್ಗಾಟ ಮೊದಲಾದ ಸ್ಪರ್ಧೆಗಳು ನಡೆಯಲಿದೆ.
ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಕಾರದೊಂದಿಗೆ ರಕ್ತದಾನ ಶಿಬಿರ ಮತ್ತು ಪುಟ್ಟಣ್ಣ ಕುಲಾಲ್ ಪ್ರತಿಷ್ಢಾನ (ರಿ) ಮಂಗಳೂರು ಇದರ ಸಹಕಾರದೊಂದಿಗೆ ಉಚಿತ ಆಯುಷ್ ಮಾನ್ ಕಾರ್ಡು ವಿತರಣೆಯನ್ನು ಆಯೋಜಿಸಲಾಗಿದ್ದು, ಮುಲ್ಕಿ ಪರಿಸರದ ನಾಗರಿಕರು ಇದರ ಪ್ರಯೋಜನವನ್ನು ಪಡೆಯುವಂತೆ ಕೋರಲಾಗಿದೆ.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು, ಮೂಲ್ಕಿ ಸೀಮೆ ಅರಸ ದುಗ್ಗಣ್ಣ ಸಾವಂತರು ಮತ್ತು ಪಡುಪಣಂಬೂರು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಉದ್ಘಾಟಿಸಲಿದ್ದಾರೆ. ಮಂಗಳೂರು ಕ್ರೀಡಾ ಭಾರತಿ ಅಧ್ಯಕ್ಷ ಕಾರ್ಯಪ್ಪ ರೈ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಅತಿಕಾರಿಬೆಟ್ಟು ಪಂಚಾಯಿತಿ ಅಧ್ಯಕ್ಷ ಮನೋಹರ್ ಕೋಟ್ಯಾನ್, ವಿನಯ ಕೃಷಿ ಬೆಳೆಗಾರರ ಸಂಘ ಮೂಲ್ಕಿ ಅಧ್ಯಕ್ಷ ವಿಜಯ ಶೆಟ್ಟಿ, ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಡೇವಿಡ್ ರೊಸಾರಿಯೋ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪದಲ್ಲಿ ಬಿಜೆಪಿಯ ಮೂಡುಬಿದಿರೆ ಮಂಡಲಾಧ್ಯಕ್ಷ ಸುನೀಲ್ ಆಳ್ವ, ಉದ್ಯಮಿ ಕಮಲಾಕ್ಷ ಬಡಗುಹಿತ್ಲು, ವಿದ್ಯಾಧರ ಶೆಟ್ಟಿ ಕೊಲ್ನಾಡು ಗುತ್ತು, ಪ್ರಮೋದ್ ಕುಡ್ವ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಮಮತಾ ಅಣ್ಣಯ್ಯ ಕುಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Kshetra Samachara
24/02/2022 08:09 pm