ಸುರತ್ಕಲ್: ಪಿಎಚ್ ಡಿ ಪದವಿ ಪಡೆದ ಸಾಧಕಿ ಡಾ. ಸುಧಾರಾಣಿ ರವರಿಗೆ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಸನ್ಮಾನ ಸಮಾರಂಭ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ ವಹಿಸಿದ್ದರು. ಸುಧಾರಾಣಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿದ್ದುಕೊಂಡು ಈಗ ಪಿಎಚ್ ಡಿ ಪದವಿಯನ್ನು ಪೂರೈಸಿದ್ದಾರೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸುಧಾರಾಣಿ ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮನೆಯ ವಾತಾವರಣ ಮಹಿಳಾ ವೇದಿಕೆಯ ಸಂಘಟನೆಯಲ್ಲಿ ಕಾಣಬಹುದು ಎಂದರು.
ಇದೇ ಸಂದರ್ಭದಲ್ಲಿ ಜೆಸಿಐ ಅಧ್ಯೆಕ್ಷೆಯಾಗಿ ಆಯ್ಕೆಗೊಂಡಿರುವ ಮಹಿಳಾ ವೇದಿಕೆಯ ಜತೆ ಕಾರ್ಯದರ್ಶಿ, ಜೆಸಿಐಯ ಅಂತರಾಷ್ಟ್ರೀಯ ತರಬೇತುದಾರೆ ರಾಜೇಶ್ವರಿ ಡಿ ಶೆಟ್ಟಿ ರವರನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ಮಹಿಳಾ ವೇದಿಕೆಯ ಮಾಜೀ ಅಧ್ಯಕ್ಷರುಗಳಾದ ಅಂಜನಾ ಶೆಟ್ಟಿ, ಮಮತಾ ಶೆಟ್ಟಿ, ಆಶಾ ಟಿ ಶೆಟ್ಟಿ, ಚಂದ್ರಕಲಾ ಶೆಟ್ಟಿ , ಬೇಬಿ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಶೆಟ್ಟಿ, ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಜೊತೆ ಕಾರ್ಯದರ್ಶಿ ರಾಜೇಶ್ವರಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಕೇಸರಿ ಪೂಂಜ, ಕ್ರೀಡಾ ಕಾರ್ಯದರ್ಶಿ ಅಕ್ಷತಾ ಶೆಟ್ಟಿ , ಸರಯು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇಡ್ಯಾ ಗ್ರಾಮದ ಕವಿತಾ ಶೆಟ್ಟಿ ಸಭೆಯ ನೇತೃತ್ವ ವಹಿಸಿದ್ದರು. ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ ಸ್ವಾಗತಿಸಿದರು.ಜ್ಯೋತಿ ಪಿ. ಶೆಟ್ಟಿ ವಂದಿಸಿದರು. ಉಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಲಯ ಸಂಘಟಕಿ ಕವಿತಾ ಪುಷ್ಪರಾಜ್ ಶೆಟ್ಟಿ ಸಭೆಯನ್ನು ಸಂಘಟಿಸಿದ್ದರು.
Kshetra Samachara
26/02/2022 04:24 pm