ಮುಲ್ಕಿ:ಸಮೀಪದ ಕೊಲ್ನಾಡ್ ನಲ್ಲಿ ಮಾಚ್೯ 11 12 13 ರಂದು ನಡೆಯುವ ಕೃಷಿಸಿರಿಯ ಕೃಷಿ ರಾಜ್ಯಸಮ್ಮೇಳನದ 2022 ರ ಪೂರ್ವಭಾವಿ ಸರಣಿ ಕಾರ್ಯಕ್ರಮದಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೋತ್ಸವ ಲಗೋರಿ, ಹಗ್ಗ ಜಗ್ಗಾಟ ಸ್ಪರ್ಧೆಗಳಿಗೆ ಫೆ. 27 ರಂದು ಭಾನುವಾರ ಕೃಷಿ ಮೇಳ ನಡೆಯುವ ಕೊಲ್ನಾಡ್ ಮೈದಾನದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಅದಾನಿ ಸಂಸ್ಥೆಯ ಕಿಶೋರ್ ಆಳ್ವ ಮಾತನಾಡಿ ಕೃಷಿಗೆ ಪೂರಕವಾಗಿ ಗ್ರಾಮೀಣ ಕ್ರೀಡಾಕೂಟಗಳಿಗೆ ಪ್ರೋತ್ಸಾಹ ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಡುಪಣಂಬೂರು ಗ್ರಾಪಂ ಸದಸ್ಯ ವಿನೋದ್ ಸಾಲ್ಯಾನ್, ಹರಿಪ್ರಸಾದ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಕೃಷಿ ಮೇಳ ಕೃಷಿಸಿರಿ 2022 ಅಧ್ಯಕ್ಷ ವಿಜಯ ಶೆಟ್ಟಿ, ಪದಾಧಿಕಾರಿಗಳಾದ ಜೀವನ್ ಶೆಟ್ಟಿ ಕಾರ್ನಾಡ್, ಮಮತಾ ಅಣ್ಣಯ್ಯ ಕುಲಾಲ್, ಡಾ. ಡೇವಿಡ್ ರೊಸಾರಿಯೋ, ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ನ ಜಗದೀಶ್ ಪೈ, ಸಂತೋಷ್ ಶೆಟ್ಟಿ, ಕೃಷ್ಣ ತಾರೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ದಿನೇಶ್ ಕೊಲ್ನಾಡು ನಿರೂಪಿಸಿದರು.
ಬಳಿಕ ಗ್ರಾಮೀಣ ಕ್ರೀಡಾಕೂಟ ಹಾಗೂ ಶ್ರೀನಿವಾಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಕಾರದೊಂದಿಗೆ ರಕ್ತದಾನ ಶಿಬಿರ ಮತ್ತು ಪುಟ್ಟಣ್ಣ ಕುಲಾಲ್ ಪ್ರತಿಷ್ಢಾನ (ರಿ) ಮಂಗಳೂರು ಸಹಕಾರದೊಂದಿಗೆ ಉಚಿತ ಆಯುಷ್ ಮಾನ್ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು.
ಬಳಿಕ ಅವಿಭಾಜಿತ ದಕ್ಷಿಣ ಕನ್ನಡ ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗೆ ಕೃಷಿ ಸಿರಿ 2022ರ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
Kshetra Samachara
28/02/2022 07:49 am