ಮುಲ್ಕಿ:ಮಹಿಳೆ ಇಂದು ಎಲ್ಲಾಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಪುರುಷರಿಗೆ ಸಮಾನವಾಗಿ ಸಾಧನೆ ಮಾಡುತ್ತಿದ್ದು ಪ್ರೋತ್ಸಾಹ ನೀಡುವ ಕಾರ್ಯವಾಗಬೇಕೆಂದು ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೊಡೆತ್ತೂರು ಮೇಘ ಶೆಟ್ಟಿ ಹೇಳಿದರು .
ಮುಲ್ಕಿ ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಜರಗಿದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಈ ಸಂದರ್ಭ ಸಮಾಜ ಸೇವಾಕಿ ಸಾವಿತ್ರಿ ಶೆಟ್ಟಿ ಕಿನ್ನಿಗೋಳಿ, ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪೂರ್ಣಿಮಾ ಸಾಯಿನಾಥ ಶೆಟ್ಟಿ, ಕೃಷಿಕ್ಷೇತ್ರದಲ್ಲಿ ಸಾಧನೆ ಮಾಡಿದ ಸುಲೋಚನಾ ಶೆಟ್ಟಿ ಆಚಾರಿಬೆನ್ನಿ ಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಚಂದ್ರಕಲಾ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ. ಕರುಣಾಕರ ಶೆಟ್ಟಿ, ಸಚಿನ್ ಶೆಟ್ಟಿ, ಮಮತಾ ಶೆಟ್ಟಿ, ಅಮೂಲ್ಯ ಶೆಟ್ಟಿ, ಶೈಲಜ ಶೆಟ್ಟಿ , ಕೆ.ಜಿ. ಬೆಟ್ಟು ನಿವಾಸಿಗಳಾದ ದಯಾನಂದ ಶೆಟ್ಟಿ, ದಿವಾಕರ ಶೆಟ್ಟಿ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
09/03/2022 11:05 pm