ಗುರುಪುರ:ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೊಂದಾದ *ಕಂದಾಯ ದಾಖಲೆ ಮನೆ ಬಾಗಿಲಿಗೆ* ಕಾರ್ಯಕ್ರಮವನ್ನು ಮಂಗಳೂರು ತಾಲೂಕು ಗುರುಪುರ ಹೋಬಳಿ ಕಂದಾವರ ಗ್ರಾಮದಲ್ಲಿ ಮಂಗಳೂರು ಉತ್ತರ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ *ಅರ್ಹ ಫಲಾನುಭವಿಗಳಿಗೆ ಶಾಸಕರು ಕಂದಾಯ ದಾಖಲೆಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ತಹಶೀಲ್ದಾರರಾದ ಪುರಂದರ ಹೆಗ್ಡೆ, ಉಪ ತಹಶೀಲ್ದಾರಾದ ಶಿವಪ್ರಸಾದ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್, ಉಪಾಧ್ಯಕ್ಷ ಚಂದ್ರಿಕಾ,ಕಂದಾಯ ನಿರೀಕ್ಷಕರು, ಪಂಚಾಯತ್ ಸದಸ್ಯರು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಹಾಜರಿದ್ದರು.
Kshetra Samachara
14/03/2022 05:03 pm