ಮುಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ವಿಜ್ರಂಭಣೆಯಿಂದ ನಡೆಯಿತು.
ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಮಾ.16 ದೇವಸ್ಥಾನದಲ್ಲಿ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ಅಂಕುರಾರೋಹಣ ನಡೆಯಿತು.
ಮಾ.17 ಗುರುವಾರ ಬೆಳಿಗ್ಗೆ 11ಗಂಟೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆದು ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಶ್ರೀದೇವಿ ಹಾಗೂ ಸಸಿಹಿತ್ಲು ಭಗವತಿಯರ ಭೇಟಿ ನಡೆದು ಮಹಾ ಅನ್ನ ಸಂತರ್ಪಣೆ,ರಾತ್ರಿ ಉತ್ಸವ ಬಲಿ ನಡೆಯಿತು.
ಈ ಸಂದರ್ಭ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಮಾಜಿ ಸಚಿವ ಅಭಯಚಂದ್ರ ಜೈನ್, ಯುವನಾಯಕ ಮಿಥುನ್ ರೈ,ಧರ್ಮದರ್ಶಿ ಹರಿಕೃಷ್ಣ ಪುನರೂರು, ವೇದಮೂರ್ತಿ ಕೊಲಕಾಡಿ ವಾದಿರಾಜ ಉಪಾಧ್ಯಾಯ, ವೆಂಕಟೇಶ್ ಹೆಬ್ಬಾರ್, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದ ಪ್ರಯುಕ್ತ ಮಾ. 23 ಹಗಲು ರಥೋತ್ಸವ, ಶ್ರೀದೇವಿಗೆ ಶಯನೋತ್ಸವ, ಮಾ.24 ಮಹಾರಥೋತ್ಸವ ನಡೆಯಲಿದೆ.
Kshetra Samachara
17/03/2022 04:50 pm