ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಸ್ರಾಲು: ಸಂಭ್ರಮದ ವರ್ಷಾವಧಿ ಮಹೋತ್ಸವ

ಸಚ್ಚೇರಿಪೇಟೆ: ಇಲ್ಲಿಗೆ ಸಮೀಪದ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಗುರುವಾರ ನಡೆಯಿತು.

ಮಾ. 17 ಗುರುವಾರ ಪ್ರಾತಃಕಾಲ ವಿಶೇಷ ಪ್ರಾರ್ಥನೆ ಕವಾಟೋದ್ಘಾಟನೆ, ತುಲಾಭಾರ ಸೇವೆ ನಡೆದು ಮಹಾಪೂಜೆ ಹಗಲು ರಥೋತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಭಕ್ತಾದಿಗಳಿಂದ ಭಜನೆ ಹೂವಿನ ಪೂಜೆ ಸಹಿತ ವಿವಿಧ ಸೇವಾದಿಗಳು ನಡೆದು ಶ್ರೀ ದೇವರ ಬಲಿ ಉತ್ಸವ ಹೊರಟು ಬ್ರಹ್ಮರಥೋತ್ಸವ, ಕಟ್ಟೆ ಪೂಜೆ, ಅವಭೃತ ಸ್ನಾನ, ಧ್ವಜಾವರೋಹಣ ,ಮಹಾಪೂಜೆ ನಡೆದು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಪುನೀತರಾದರು.

ಈ ಸಂದರ್ಭ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಎಂ. ಸುಧಾಕರ ಶೆಟ್ಟಿ, ದೇವಸ್ಥಾನದ ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/03/2022 10:08 pm

Cinque Terre

2.63 K

Cinque Terre

0

ಸಂಬಂಧಿತ ಸುದ್ದಿ