ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬಾಕಿಮಾರು ದೀಪೋತ್ಸವ ವಿಜ್ರಂಭಣೆಯಿಂದ ನಡೆಯಿತು.
ದೇವಸ್ಥಾನದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ ಮಧ್ಯಾಹ್ನ ಅನ್ನಸಂತರ್ಪಣೆ ರಾತ್ರಿ ಬಲಿ ಉತ್ಸವ ಹಾಗೂ ಶ್ರೀ ದೇವರ ಬಾಕಿಮಾರು ದೀಪೋತ್ಸವ ವ ನಡೆಯಿತುಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು,ನಾಗೇಶ್ ಬಪ್ಪನಾಡು, ಚಂದ್ರಶೇಖರ್ ಸುವರ್ಣ, ವೆಂಕಟೇಶ ಹೆಬ್ಬಾರ್, ಮುಲ್ಕಿ ಠಾಣಾ ಎಎಸ್ಸೈ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು
Kshetra Samachara
21/03/2022 11:01 pm