ಮುಲ್ಕಿ: ಮುಲ್ಕಿಯ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಬೊಂಬೆ ರಥೋತ್ಸವ ನಡೆಯಿತು.
ಸಾವಿರಾರು ಮಂದಿ ಭಕ್ತಾದಿಗಳು ರಥ ಎಳೆದು ಪುನೀತರಾದರು. ಈ ಸಂದರ್ಭ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ನರಸಿಂಹ ಭಟ್, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಹರಿಕೃಷ್ಣ ಪುನರೂರು, ವೇ.ಮೂ ವಾದಿರಾಜ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಮಾ. 23 ಹಗಲು ರಥೋತ್ಸವ,ರಾತ್ರಿ ಶಯನೋತ್ಸವ, ಮಾ. 24 ಬೆಳಿಗ್ಗೆ ಕವಾಟೋದ್ಘಾಟನೆ, ರಾತ್ರಿ ಮಹಾರಥೋತ್ಸವ ನಡೆಯಲಿದೆ.
Kshetra Samachara
22/03/2022 11:36 am