ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿಗಳು ಹಾಗೂ ಕ್ಷೇತ್ರದ ಆರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ಚಂಡಿಕಾಯಾಗ ಭಕ್ತಿಭಾವದಿಂದ ನೆರವೇರಿತು. ಪ್ರಾತಃಕಾಲ ವಿಶೇಷ ಪ್ರಾರ್ಥನೆ ನಡೆದು ಚಂಡಿಕಾಯಾಗ ಕ್ಕೆ ಚಾಲನೆ ನೀಡಲಾಯಿತು.
ಮಧ್ಯಾಹ್ನ ಪೂರ್ಣಾಹುತಿ, ವಿಶೇಷ ಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಉಪಾಧ್ಯಕ್ಷ ಮೋಹನ್ ದಾಸ್,ಸದಸ್ಯ ಗುರುರಾಜ ಎಸ್ ಪೂಜಾರಿ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಜಿಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರಿದಾಸ್ ಭಟ್, ಸದಸ್ಯರಾದ ವಿಜಯಕುಮಾರ್ ರೈ, ಎಲ್.ಕೆ ಸಾಲ್ಯಾನ್, ಪುರುಷೋತ್ತಮ ರಾವ್, ವಿಜಯಕುಮಾರ್ ರೈ, ಯೋಗೀಶ್ ಕೋಟ್ಯಾನ್, ವಿಪುಲ ಡಿ ಶೆಟ್ಟಿಗಾರ್, ಶಾರದಾ ಬಂಗೇರ, ವಿಶ್ವನಾಥ್, ಎಸ್ ಕೆ ಪಿ ಎ ನ ಮೋಹನ್ ರಾವ್ ಪಾವಂಜೆ,ವಿಜಯ ಶೆಟ್ಟಿ ಕೋಲ್ನಾಡು ಊರ ಪರವೂರ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು
Kshetra Samachara
01/04/2022 12:39 pm