ಮುಲ್ಕಿ: ಮೂಲ್ಕಿ ಸೀಮೆಯ ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯುಗಾದಿ ಹಬ್ಬದ ಶುಭ ದಿನದಂದು "ರಾಜ್ಯ ಧಾರ್ಮಿಕ ದಿನಾಚರಣೆ"ವಿಶೇಷವಾಗಿ ಆಚರಿಸಲಾಯಿತು.
ಯುಗಾದಿ ಹಬ್ಬದ ರಾಜ್ಯ ಧಾರ್ಮಿಕ ದಿನಾಚರಣೆ ಪ್ರಯುಕ್ತ ದೇವಸ್ಥಾನದಲ್ಲಿ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ಭಜನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭ ಮುಲ್ಕಿ ನಪಂ ಅಧ್ಯಕ್ಷ ಸುಭಾಶ್ ಶೆಟ್ಟಿ, ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಗೋಪಾಲಕೃಷ್ಣ ಉಪಾಧ್ಯಾಯ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಯುವಕ ವೃಂದದ ಅಧ್ಯಕ್ಷ ಕೃಷ್ಣ ಶೆಟ್ಟಿ, ಅಕೌಂಟೆಂಟ್ ಶಿವಶಂಕರ್, ಕಾರ್ತಿಕ್ ಕೋಟ್ಯಾನ್, ಗುರುವರಾಜ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/04/2022 04:00 pm