ಸುರತ್ಕಲ್:ಕೈಗಾರಿಕೆಗಳು ತನ್ನ ಲಾಭಾಂಶದ ಸ್ವಲ್ಪ ಪ್ರಮಾಣವನ್ನು ಸ್ಥಳೀಯ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನೀಡಿ ಸಹಕಾರ ನೀಡಬೇಕು ಎಂದು ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.ಅವರು ಸೂರಿಂಜೆ ಗ್ರಾಮ ಪಂಚಾಯತ್ ನಲ್ಲಿ ಎಂ,ಅರ್,ಪಿ,ಎಲ್ ಸಂಸ್ಥೆಯ ವತಿಯಿಂದ ಸುಮಾರು 35.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ,ಅರ್,ಪಿ,ಎಲ್ ಸಂಸ್ಥೆಯ ಸಿ,ಎಸ್,ಅರ್ ವಿಭಾಗದ ಸಿನಿಯರ್ ಮ್ಯಾನೇಜರ್ ನಾಗರಾಜ್ ರಾವ್ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರಿಂಜೆ ಗ್ರಾ ಪಂ ಅಧ್ಯಕ್ಷ ಜೀತೆಂದ್ರ ಶೆಟ್ಟಿ ವಹಿಸಿದ್ದರು.
ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಜಿ ಪಂ ಇಂಜಿನಿಯರ್ ಪ್ರಶಾಂತ್ ಆಳ್ವ,ಕೆ.ಡಿ.ಪಿ ಸದಸ್ಯ ಬೋಜರಾಜ್ ಶೆಟ್ಟಿ ಸೂರಿಂಜೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
02/04/2022 09:26 pm