ಮುಲ್ಕಿ:ಮುಲ್ಕಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಬಾಲಾಲಯದಲ್ಲಿ ಶ್ರೀಸುಬ್ರಹ್ಮಣ್ಯ ದೇವರ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಮಂಗಳವಾರ ಸಂಜೆ ದೇವಳದ ತಂತ್ರಿಗಳಾದ ವೇದಮೂರ್ತಿ ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ಸಾಮೂಹಿಕ ದೇವತಾ ಪ್ರಾರ್ಥನೆ ನಡೆದು ಪಂಚಗವ್ಯ ಪುಣ್ಯಾಹವಾಚನ, ವಾಸ್ತು ಪೂಜಾ, ವಾಸ್ತು ಹೋಮ, ವಾಸ್ತು ಬಲಿ ,ಪ್ರಾಕಾರ ಬಲಿ, ಬಾಲಾಲಯದಲ್ಲಿ ಸಪ್ತಶುದ್ದಿ, ರಾಕ್ಷೋಘ್ನ ಹೋಮ, ಪ್ರಾಕಾರ ಬಲಿ ನಡೆಯಿತು.
ಎ. 7 ಬುಧವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬಾಲಾಲಯದಲ್ಲಿ ಶ್ರೀ ದೇವರ ಪ್ರತಿಷ್ಠೆ , ನವಕ ಕಲಶಾಭಿಷೇಕ, ಪ್ರಸನ್ನ ಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ ನಡೆಯಲಿದೆ.
ಈ ಸಂದರ್ಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಉಪಾಧ್ಯಕ್ಷ ಮೋಹನ್ ದಾಸ್,ಸದಸ್ಯ ಗುರುರಾಜ ಎಸ್ ಪೂಜಾರಿ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರಿದಾಸ್ ಭಟ್, ಸದಸ್ಯರಾದ ವಿಜಯಕುಮಾರ್ ರೈ, ಎಲ್.ಕೆ ಸಾಲ್ಯಾನ್, ಪುರುಷೋತ್ತಮ ರಾವ್, ವಿಜಯಕುಮಾರ್ ರೈ, ಯೋಗೀಶ್ ಕೋಟ್ಯಾನ್, ವಿಪುಲ ಡಿ ಶೆಟ್ಟಿಗಾರ್, ಶಾರದಾ ಬಂಗೇರ, ವಿಶ್ವನಾಥ್,ಸಮಿತಿಯ ಸುಗಂಧಿ ದಿನೇಶ್ ಕೊಂಡಾಣ ಊರ ಪರವೂರ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
05/04/2022 08:03 pm