ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಪ್ತ ಶುದ್ದಿ, ರಾಕ್ಷೋಘ್ನ ಹೋಮ ಪ್ರಾಕಾರ ಬಲಿ

ಮುಲ್ಕಿ: ಮುಲ್ಕಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ದೇವಸ್ಥಾನದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಏಪ್ರಿಲ್ 5 ಸಂಜೆ ಬಾಲಾಲಯದಲ್ಲಿಸಪ್ತ ಶುದ್ದಿ, ರಾಕ್ಷೋಘ್ನ ಹೋಮ ಪ್ರಾಕಾರ ಬಲಿ ನಡೆಯಿತು.

ಏಪ್ರಿಲ್ 6 ಬುಧವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶ್ರೀ ದೇವರ ಪ್ರತಿಷ್ಠೆ, ನವಕ ಕಲಶಾಭಿಷೇಕ ಪ್ರಸನ್ನ ಪೂಜೆ ಹಾಗೂ ಮಹಾ ಅನ್ನ ಸಂತರ್ಪಣೆ ನಡೆಯಲಿದೆ.

ಈ ಸಂದರ್ಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರಿದಾಸ್ ಭಟ್, ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

05/04/2022 08:30 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ