ಮುಲ್ಕಿ: ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ವರ್ಧಂತಿ ಪ್ರಯುಕ್ತ ದೇವಸ್ಥಾನದ ತಂತ್ರಿಗಳು ಹಾಗೂ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ದೇವಸ್ಥಾನದಲ್ಲಿ ರಂಗ ಪೂಜೆ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ನಾರಾಯಣಶೆಟ್ಟಿ ಶೇಖರ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಕಿಶೋರ್ ಶೆಟ್ಟಿ ಬಪ್ಪನಾಡು, ಡಾ. ಹರಿಶ್ಚಂದ್ರ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/04/2022 10:19 pm