ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿ.ಪಂ, ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸ್ತ್ರೀ ಶಕ್ತಿ ಒಕ್ಕೂಟ ಇದರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅಕ್ಷಜ್ ಇವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ 2021-22 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್ ಉಪಸ್ಥಿತರಿದ್ದರು.
ಅಕ್ಷಜ್ ರವರು ಸುರತ್ಕಲ್‌ನ ಏನ್.ಐ.ಟಿ.ಕೆ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಹರೀಶ್ ಆಚಾರ್ಯ ಮತ್ತು ಮಂಗಳ ದಂಪತಿಯ ಸುಪುತ್ರ.
Kshetra Samachara
11/04/2022 11:59 am