ಮುಲ್ಕಿ:ದೂರದೃಷ್ಟಿಯುಳ್ಳ ಚಿಂತನೆ ಯೊಂದಿಗೆ ಡಾ ಬಿಆರ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಭಾರತ ದೇಶ ಸಮೃದ್ಧಿ ಯಾಗಲು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಳೆಯಂಗಡಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ಹೆಚ್ ವಸಂತ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಹರಿಯಪ್ಪ ಸಾಲಿಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸರ್ಫ್ರಾಜ್ ಬಾಳ, ಕಿರಣ್ ಶೆಟ್ಟಿ ,ಹಳೆಯಂಗಡಿ ಪಂಚಾಯತ್ ಸದಸ್ಯರಾದ ಅಬ್ದುಲ್ ಖಾದರ್, ಅಬ್ದುಲ್ ಅಜೀಜ್, ಹಮೀದ್ ಸಾಗ್, ಧರ್ಮನಂದ ಶೆಟ್ಟಿಗಾರ್, ಅದ್ದು ಅಂಗರಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/04/2022 01:41 pm