ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ನಿರ್ಮಾಣಗೊಳ್ಳಲಿರುವ ನೂತನ ಶ್ರೀಸುಬ್ರಹ್ಮಣ್ಯ ದೇವರ ಶಿಲಾಮಯ ಗರ್ಭಗುಡಿ, ಸುತ್ತು ಪೌಳಿಯ "ಶಿಲಾನ್ಯಾಸ" ವು ಪೇಜಾವರ ಶ್ರೀ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಉಪಸ್ಥಿತಿಯಲ್ಲಿ ವೇ.ಮೂ.ಪಂಜ ಭಾಸ್ಕರ ಭಟ್ ಹಾಗೂ ದೇವಸ್ಥಾನದ ತಂತ್ರಿಗಳಾದ ವೇ.ಮೂ. ಶಿಬರೂರು ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಭಾನುವಾರ ನಡೆಯಿತು.
ಈ ಸಂದರ್ಭಪೇಜಾವರ ಶ್ರೀ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಆಶೀರ್ವಚನ ನೀಡಿ ದೇವಸ್ಥಾನದ ಜೀರ್ಣೋದ್ಧಾರದಿಂದ ಗ್ರಾಮದಲ್ಲಿ ಸುಭೀಕ್ಷೆ ನೆಲೆಸುವುದು, ಆದಷ್ಟು ಬೇಗ ನೂತನ ದೇವಾಲಯ ನಿರ್ಮಾಣಗೊಳ್ಳಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಕುಡುಪು ಕೃಷ್ಣರಾಜ ತಂತ್ರಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಉತ್ರಂಜೆ,ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಗಿರಿ ಪ್ರಕಾಶ್ ತಂತ್ರಿ ಪೊಳಲಿ,ದೇವಸ್ಥಾನದ ಅರ್ಚಕ ಮದುಸೂದನ ಆಚಾರ್ಯ,ಪಟೇಲ್ ವಾಸುದೇವರಾವ್ ಪುನರೂರು, ದೇವಪ್ರಸಾದ್ ಪುನರೂರು,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ಸದಸ್ಯರು ಊರ ಪರವೂರ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/04/2022 11:08 am