ಮುಲ್ಕಿ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ರವರಿಗೆ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ಅಭಿಮಾನಿ ಬಳಗದ ವತಿಯಿಂದ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮೇ.1ರಂದು ನಡೆಯಲಿದೆ ಎಂದು ಕಟೀಲು ಕ್ಷೇತ್ರದ ಆರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಅವರು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಮೇ.1 ಭಾನುವಾರ ಸಂಜೆ3.30ಕ್ಕೆ ಡಾ. ಹರಿಕೃಷ್ಣ ಪುನರೂರು ರವರನ್ನು ಅವರ ನಿವಾಸದಿಂದ ವಿಜ್ರಂಭಣೆಯಿಂದ ಮೆರವಣಿಗೆಯಲ್ಲಿ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣಕ್ಕೆ ಕರೆತರಲಾಗುವುದು.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತಿ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಟೀಲು ಕ್ಷೇತ್ರದ ಆರ್ಚಕ ವೇ.ಮೂ. ಲಕ್ಷ್ಮೀನಾರಾಯಣ ಆಸ್ರಣ್ಣ ಶುಭಾಶಂಸನೆಗೈಯಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಮೋಹನ್ ಆಳ್ವ ವಹಿಸಲಿದ್ದಾರೆ.
ಮಂಗಳೂರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದರು
ವೇದಿಕೆಯಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ರವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತ ನೃತ್ಯ ವೈವಿದ್ಯ ಕಾರ್ಯಕ್ರಮ ನಡೆಯಲಿದೆ ಎಂದರು.
ಸಭೆಯಲ್ಲಿ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಕೊಲಕಾಡಿ ವೇಮೂ ವಾದಿರಾಜ ಉಪಾಧ್ಯಾಯ, ದೇವಸ್ಥಾನದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಪುರಂದರ ಶೆಟ್ಟಿಗಾರ್, ವೆಂಕಟೇಶ ಹೆಬ್ಬಾರ್, ಸುರೇಶ್ ರಾವ್ ನೀರಳಿಕೆ, ಪುನರೂರು ವಿಪ್ರ ಸಂಪದದ ಅಧ್ಯಕ್ಷ ಸುಧಾಕರ ರಾವ್, ನಿವೃತ್ತ ಶಿಕ್ಷಕ ರಾಮಭಟ್, ರವಿ ಶೆಟ್ಟಿ ಪುನರೂರು, ಪ್ರತಿಭಾ ಹೆಬ್ಬಾರ್, ಶೋಭಾ ರಾವ್, ಮುಖ್ಯಪ್ರಾಣ,ಪಟೇಲ್ ವಿಶ್ವನಾಥ ರಾವ್, ಗೋಪಿನಾಥ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಿನ್ನಿಗೋಳಿ ಯಕ್ಷಲಹರಿ ಅಧ್ಯಕ್ಷ ರಘುನಾಥ್ ಕಾಮತ್ ನಿರೂಪಿಸಿದರು.
Kshetra Samachara
27/04/2022 08:38 pm