ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರಗಿರಿ:ಧಾರ್ಮಿಕ ನಂಬಿಕೆಯ ಜೊತೆ ಏಕಾಗ್ರತೆ ಮತ್ತು ಸಮರ್ಪಣಾ ಭಾವನೆ ಇರಬೇಕು

ಮುಲ್ಕಿ:ಮಕ್ಕಳಿಗೆ ಉತ್ತಮ ಮೌಲ್ಯಯುತವಾದ, ಸಂಸ್ಕೃತಿ, ಆಚಾರ ವಿಚಾರಯುತವಾದ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುವ ಹೊಣೆಗಾರಿಕೆ ಗುರು-ಹಿರಿಯರನ್ನು ಎಂದು ಉಪನ್ಯಾಸಕ ಜಿಲ್ಲಾ ರಾಜೋತ್ಸವ ಪುರಸ್ಕೃತ ಡಾ| ಅರುಣ್ ಉಳ್ಳಾಲ್ ಹೇಳಿದರು.

ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಸುರಗಿರಿ ಯುವಕ ಮಂಡಲದ 52 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಅವರು ಧಾರ್ಮಿಕ ನಂಬಿಕೆಯ ಜೊತೆ ಏಕಾಗ್ರತೆ ಮತ್ತು ಸಮರ್ಪಣಾ ಭಾವನೆ ಇರಬೇಕು ಎಂದರು ಕೊಡೆತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಆಡಳಿತ ಮೊPಸರ ದೇವಿ ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ವಿಠಲ್ ಕುಂದರ್ ಕೆಮ್ರಾಲ್ ಹಾಗೂ ದ. ಕ. ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಮ ಶೇರಿಗಾರ ಅವರಿಗೆ ಕೋಡು ಗುರುರಾಜ ಭಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸುರಗಿರಿ ದೇವಳದ ಪ್ರಧಾನ ಅರ್ಚಕ ವೇ.ಮೂ. ವಿಶ್ವೇಶ್ವರ ಭಟ್ , ದೇವಳದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಕಾವೂರು ಮುಪ್ಪುಂಜ ಗುತ್ತು ವಿಜಯ ಎನ್ ಶೆಟ್ಟಿ , ಸುರಗಿರಿ ಮಹಿಳಾ ಮತ್ತು ಯುವತಿ ಮಂಡಲದ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ,ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು. ಪ್ರಸನ್ನ ಎಲ್ ಶೆಟ್ಟಿ ಅತ್ತೂರು ಗುತ್ತು ಅಭಿನಂದನಾ ಭಾಷಣಗೈದರು, ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಹೊಸಲೊಟ್ಟು ಸ್ವಾಗತಿಸಿದರು. ಜನಾzನ ಕಿಲೆಂಜೂರು ವಂದಿಸಿದರು. ಕಿರಣ್ ಶೆಟ್ಟಿ ಭಂಡಾರ ಮನೆ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

28/04/2022 06:43 pm

Cinque Terre

1.5 K

Cinque Terre

0

ಸಂಬಂಧಿತ ಸುದ್ದಿ