ಮುಲ್ಕಿ: ಮುಲ್ಕಿ ಸಮೀಪದ ಕೊಲಕಾಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠಾಪನೆ ಹಾಗೂ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಪ್ರಾತಃಕಾಲ ಕೊಲಕಾಡಿ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಹಾಗೂ ಶ್ರೀಕಾಂತ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಮೈಸಂದಾಯ, ಕಾಂತೇರಿ ಜುಮಾದಿ ಬಂಟ, ಸರಳ ಜುಮಾದಿ ಬಂಟ ಮತ್ತು ಅಣ್ಣಪ್ಪ ಪಂಜುರ್ಲಿ ಹಾಗೂ ವರ್ತೆ ಪಂಜುರ್ಲಿ ದೈವಗಳಿಗೆ ನೂತನವಾಗಿ ನಿರ್ಮಿಸಿದ ಗರ್ಭಗುಡಿಯಲ್ಲಿ ಪುನರ್ ಪ್ರತಿಷ್ಠಾಪನೆ ಹಾಗೂ ನೇಮೋತ್ಸವ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್, ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್, ಓಂ ಶ್ರೀ ಕೊಲಕಾಡಿ ಮೇಗಿನ ಮನೆ ವಾದಿರಾಜ ಶೆಟ್ಟಿ, ರಂಜನ್ ಶೆಟ್ಟಿ, ಗುಣೀಶ್ ಶೆಟ್ಟಿ,ಕೊಂಪದವು ನಳಿನಿ ಕೊರಗ ಶೆಟ್ಟಿ, ಗಂಗಾಧರ ಶೆಟ್ಟಿ ಬೆರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
Kshetra Samachara
05/05/2022 09:53 am