ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರಾಪುರ:4.60 ಕೋಟಿ ವೆಚ್ಚದಲ್ಲಿ ಕಡಲ್ಕೊರೆತ ತಡೆ ಕಾಮಗಾರಿ: ಡಾ ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಸಮೀಪದ ಚಿತ್ರಾಪುರದಲ್ಲಿ ಕಡಲ್ಕೊರೆತ ತಡೆ ಕಾಮಗಾರಿಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ವೀಕ್ಷಿಸಿದರು.

ಈ ಸಂದರ್ಭ ಮಾತನಾಡಿದ ಅವರು ಕಡಲ್ಗೊರೆತ ತಡೆಗೆ ಈ ಭಾಗದಲ್ಲಿ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಅಂದಾಜು 4.60 ಕೊಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಚಿತ್ರಾಪುರದಲ್ಲಿ ಮೀನುಗಾರಿಕೆಗೆ ಮತ್ತು ಧಾರ್ಮಿಕ ಕಾರ್ಯಗಳಿಗೆ ಅಡಚಣೆಯಾಗದಂತೆ ಈಗಿರುವ ನಕ್ಷೆಯಲ್ಲಿ ದೋಣಿ ಇಳಿಸುವ ಭಾಗದಲ್ಲಿ ಮಾರ್ಪಾಡು ಮಾಡುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‌ಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.ಉಳಿದೆಡೆ ಮೀನುಗಾರರಿಗೆ ಅನುಕೂಲವಾಗುವ ಮಾದರಿಯಲ್ಲಿ ಕಾಮಗಾರಿ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಈ ಸಂದರ್ಭ ಮಾಜಿ ಮೇಯರ್‌ ಗಣೇಶ್‌ ಹೊಸಬೆಟ್ಟು ಮನಪಾ ಸದಸ್ಯ ರಾಜೇಶ್ ಸಾಲ್ಯಾನ್ ಬೈಕಂಪಾಡಿ, ಮತ್ಸೋದ್ಯಮಿ ಉಮೇಶ್ ಕರ್ಕೆರ, ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್‌, ಗಿರೀಶ್ ಕರ್ಕೇರ, ಶಿವಾಜಿ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/05/2022 08:42 pm

Cinque Terre

2.4 K

Cinque Terre

0

ಸಂಬಂಧಿತ ಸುದ್ದಿ