ಮುಲ್ಕಿ: ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಶ್ರೀ ಉಳ್ಳಾಯ ದೈವಸ್ಥಾನದಲ್ಲಿ ಕಂಡೇವುದ ಆಯನದ ಅಂಗವಾಗಿ ಧರ್ಮರಸು ಶ್ರೀ ಉಳ್ಳಾಯ ದೈವದ ನೇಮೋತ್ಸವ ವಿಜ್ರಂಭಣೆಯಿಂದ ನಡೆಯಿತು.
ಮೇ 15 ಭಾನುವಾರ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಧರ್ಮರಸು ಶ್ರೀ ಉಳ್ಳಾಯ, ಇಷ್ಟ ದೇವತೆ, ಬಬ್ಬರ್ಯ ಹಾಗೂ ಪರಿವಾರ ದೈವಗಳ ನೇಮೋತ್ಸವ, ನಂದಿಗೋಣ, ಕುಮಾರ ಸಿರಿಗಳ ಭೇಟಿ ನಡೆಯಿತು. ಬೆಳಿಗ್ಗೆ 7ಕ್ಕೆ ಶ್ರೀ ನಾಗದೇವರಿಗೆ ಭಕ್ತಾದಿಗಳಿಂದ ತಂಬಿಲ ಸೇವೆ ನಡೆಯಿತು.
ಸಂಜೆ 4.30 ಕ್ಕೆ ಬಾಕಿಮಾರು ಗದ್ದೆಯಲ್ಲಿ ಚೆಂಡು, 6 ಗಂಟೆಗೆ ಪರಿವಾರ ದೈವಗಳಿಗೆ ಜೋಡಿ ನೇಮೋತ್ಸವ, ರಾತ್ರಿ7.30ಕ್ಕೆ ಶ್ರೀ ಉಳ್ಳಾಯ ಮತ್ತು ಪರಿವಾರ ದೈವಗಳಿಗೆ ಸಾಮೂಹಿಕ ಹೂವಿನ ಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು.ರಾತ್ರಿ ದ್ವಜಾವರೋಹಣ, ಖಂಡಿಗೆ ಬೀಡಿನ ಭಂಡಾರ ನಿರ್ಗಮನ ನಡೆಯಿತು.
ಈ ಸಂದರ್ಭದ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
15/05/2022 08:48 am