ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಶಾಲಾ ಪ್ರಾರಂಭೋತ್ಸವ; ವಿಶ್ವ ಡೆಂಗ್ಯೂ ದಿನ ಆಚರಣೆ

ಮುಲ್ಕಿ: ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಪ್ರಾರಂಭೋತ್ಸವ ಹಾಗೂ ವಿಶ್ವ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಸಭಾಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರಪೂಜಾರಿ ಮಾತನಾಡಿ ಪರಿಸರ ಸ್ವಚ್ಛತೆಗೆ ಗಮನ ಹರಿಸುವುದರ ಜೊತೆಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಕರ್ತವ್ಯವಾಗಿದೆ. ಪರಿಸರ ಸ್ವಚ್ಛತೆ ಇದ್ದರೆ ಮಾತ್ರ ಉತ್ತಮ ಆರೋಗ್ಯ ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳೆ ವಹಿಸಿ ಮಾತನಾಡಿ ಮಕ್ಕಳು ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ ಕೀರ್ತಿವಂತನಾಗಿ

ಎಂದು ಶುಭ ಹಾರೈಸಿದರು

ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಅನಿತಾ ಡೆಂಗ್ಯೂ ರೋಗದ ಬಗ್ಗೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ಮನವಿ ಮಾಡಿದರು.

ವೇಧಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ನಪಂ ಸದಸ್ಯ ಪುತ್ತುಬಾವ, ಎಸ್ಡಿಎಂಸಿ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಸದಸ್ಯರುಗಳಾದ ಅಪ್ಪಿ, ಯೋಗಿನಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ನಾಯಕ್, ಮತ್ತಿತರರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು. ಶಿಕ್ಷಕಿ ಆಶಾ ಭಟ್ ಸ್ವಾಗತಿಸಿದರು ಮೀನಾಕ್ಷಿ ಧನ್ಯವಾದ ಅರ್ಪಿಸಿದರು ಸುಮನ ಸುವರ್ಣ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಮೊದಲು ಮುಲ್ಕಿ ನಗರ ಪಂಚಾಯತ್ ಸಿಬ್ಬಂದಿ ಹಾಗೂ, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರಿಂದ ಶಿಕ್ಷಣ ಹಾಗೂ ಡೆಂಗ್ಯೂ ಜಾಗೃತಿ ಜಾಥಾ ಹಾಗೂಮುಲ್ಕಿ ನಪಂ ನಿಂದ ಪ್ರೌಢಶಾಲೆಯವರೆಗೆ ನಡೆಯಿತು.

Edited By : PublicNext Desk
Kshetra Samachara

Kshetra Samachara

16/05/2022 12:09 pm

Cinque Terre

1.87 K

Cinque Terre

0

ಸಂಬಂಧಿತ ಸುದ್ದಿ