ಮುಲ್ಕಿ:ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವು ಇವತ್ತಿನ ಕಾಲ ಘಟ್ಟದಲ್ಲಿ ವಿಶ್ವದಾದ್ಯಂತ ಅತ್ಯಂತ ಮಹತ್ವದಾಗಿದ್ದು ಶಿಕ್ಷಣ ಕ್ರಾಂತಿಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವೆಂಬುದನ್ನು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ.ನಾವು ತಿಳಿದು ಮತ್ತೊಬ್ಬರಿಗೆ ತಿಳಿಸುವ ಜೊತೆಗೆ ಕಾಲಕ್ಕೆ ತಕ್ಕಂತೆ ಆಚಾರ ವಿಚಾರಗಳಲ್ಲಿ ಬದಲಾವಣೆ ತರಬೇಕೆಂದು ಆರ್ಯ ಈಡಿಗರ ಮಹಾ ಸಂಸ್ತಾನದ ಪೀಠಾಧಿಪತಿ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ ಹೇಳಿದರು.
ಮುಲ್ಕಿ ಕೆ ಎಸ್ ರಾವ್ ನಗರ ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ.)ದಲ್ಲಿ ನೂತನವಾಗಿ ನಿರ್ಮಿಸಿದ ಅಮೃತ ಶಿಲೆಯ ನೂತನ ಗುರು ಮೂರ್ತಿ ಪ್ರತಿಷ್ಠಾಪನೆ-ಕಲಶಾಭಿಷೇಕ,ನೂತನ ಗುರು ಮಂದಿರ ಉದ್ಘಾಟನೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ವಹಿಸಿದ್ದರು.
ಸಭೆಯ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ ಅಭಯಚಂದ್ರ ಜ್ಯೆನ್,ಮುಲ್ಕಿ ನ ಪಂ ಅಧ್ಯಕ್ಷ ಸುಭಾಷ್ ಶೆಟ್ಟಿ,ಹ್ಯೆಕೋರ್ಟ್ ನ್ಯಾಯವಾದಿ ಎ ಕೆ ವಸಂತ್,ಮೂಡುಬಿದಿರೆ ನಗರಾಭಿವೃದ್ದಿ ಪ್ರಾಽಕಾರದ ಅಧ್ಯಕ್ಷ ಮೇಘನಾಥ್ ಶೆಟ್ಟಿ,ಭಾರತ್ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕಿ ಶಾರದಾ ಸೂರು ಕರ್ಕೇರ,ಸಂಘದ ಉಪಾಧ್ಯಕ್ಷ ಮಹಾಬಲ ಎಸ್ ಸನಿಲ್ ,ಜೀವನ್ ಪೂಜಾರಿ,ಕೋಶಾಧಿಕಾರಿ ಅಶೋಕ ಅಮೀನ್ ,ಸಂಘದ ಅಧ್ಯಕ್ಷ ರಾಘವ ಎ ಸುವರ್ಣ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಕೋಟ್ಯಾನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Kshetra Samachara
20/05/2022 05:24 pm