ಬೆಂಗಳೂರು:ಉಡುಪಿ ಜಿಲ್ಲೆಯ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಖ್ಯಾತ ಆಧ್ಯಾತ್ಮಿಕ ಚಿಂತಕ ರಮಾನಂದ ಗುರೂಜಿ ಅವರಿಗೆ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ .
ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿನ ಗಣನೀಯ ಸಾಧನೆಗಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ .
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಅರಳಿ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು.ಡಾ. ಎಚ್ ಎಲ್ ಎನ್ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹಾಗೂ ಖ್ಯಾತ ಕನ್ನಡ ಚಲನಚಿತ್ರ ನಟಿ ಹಾಗೂ ಪದ್ಮಶ್ರೀ ಪುರಸ್ಕೃತ ಭಾರತಿ ವಿಷ್ಣುವರ್ಧನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ಧು ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರತಿಷ್ಠಿತರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಿದ್ದಾರೆ.
Kshetra Samachara
26/05/2022 08:52 pm